ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಯಮಾವಳಿ-2025 ರ ಕರಡಿನಲ್ಲಿರುವ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ನಿಬಂಧನೆಗಳನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದೆ.

ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಕುಲಪತಿಗಳ ನೇಮಕಾತಿಗಳಿಗೆ ಸಂಬಂಧಿಸಿದ ನಿಬಂಧನೆಗಳಿಂದ “ಒಕ್ಕೂಟ ವ್ಯವಸ್ಥೆಗೆ ಧಕ್ಕೆ”ಯಾಗಲಿದೆ ಮತ್ತು ಉನ್ನತ ಶಿಕ್ಷಣವನ್ನು ಸುಧಾರಿಸುವಲ್ಲಿ ರಾಜ್ಯ ಸರ್ಕಾರಗಳು ವಹಿಸುವ ಕಾನೂನುಬದ್ಧ ಪಾತ್ರವನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದ್ದಾರೆ.

Nk Cake House

ಇತ್ತೀಚೆಗೆ ಯುಜಿಸಿ(ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿ ಮತ್ತು ಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ನಿರ್ವಹಣೆಗಾಗಿ ಕ್ರಮಗಳು) ನಿಯಮಗಳು, 2025 ರ ಕರಡನ್ನು ಸಾರ್ವಜನಿಕ ಸಮಾಲೋಚನೆಗಾಗಿ ಯುಜಿಸಿ ಪ್ರಕಟಿಸಿದೆ. ಈ ಕರಡನ್ನು ಈಗ ಸಾರ್ವಜನಿಕ ಸಮಾಲೋಚನೆಗಾಗಿ ಇಡಲಾಗಿದೆ ಮತ್ತು ಅದರ ನಿಬಂಧನೆಗಳಲ್ಲಿ ಒಂದು ವಿಸಿಗಳ ನೇಮಕಾತಿಗೆ ವ್ಯಾಪಕ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

Also Read  ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ- ಮಧು ಬಂಗಾರಪ್ಪ

error: Content is protected !!
Scroll to Top