(ನ್ಯೂಸ್ ಕಡಬ) newskadaba.com ಜ.15 : ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿಸಿರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾಯವಾಗಿದ್ದು ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.