(ನ್ಯೂಸ್ ಕಡಬ) newskadaba.com ಜ.15 : ಬಿಜೆಪಿ, ಆರ್ಎಸ್ಎಸ್ ವಶಪಡಿಸಿಕೊಂಡಿರುವ ಭಾರತ ವಿರುದ್ಧ ಹೋರಾಟ ನಡೆಸಬೇಕೆಂದು ಎಐಸಿಸಿ ಹೊಸ ಕಟ್ಟಡ ಉದ್ಘಾಟನೆ ವೇಳೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ಗಾಂಧಿ ಹೇಳಿದ್ದಾರೆ.

 

Nk Cake House

 

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಆರ್‌ಎಸ್‌ಎಸ್‌ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ಹೀಗಾಗಿ ಈ ಎರಡು ಸಂಸ್ಥೆಗಳು ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ ಎಂದರು. ಮಾಧ್ಯಮವು ಇನ್ನು ಕೂಡ ಮುಕ್ತ ಮತ್ತು ನ್ಯಾಯಯುತವಾಗಿಲ್ಲ. ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ ಸುಮಾರು ಒಂದು ಕೋಟಿ ಹೊಸ ಮತದಾರರು ದಿಢೀರ್‌ ಕಾಣಿಸಿಕೊಂಡಿದ್ದಾರೆ.ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆ ಇದೆ ಮತ್ತು ಪಾರದರ್ಶಕವಾಗಿರುವುದು ಚುನಾವಣಾ ಆಯೋಗದ ಕರ್ತವ್ಯ ಎಂದು ಹೇಳಿದರು.ಈ ದೇಶದಲ್ಲಿ ಬಿಜೆಪಿಯನ್ನು ತಡೆಯಲು ಬೇರೆ ಯಾವುದೇ ಪಕ್ಷದಿಂದ ಸಾಧ್ಯವಿಲ್ಲ. ಅವರನ್ನು ತಡೆಯಬಲ್ಲ ಏಕೈಕ ಪಕ್ಷ ಕಾಂಗ್ರೆಸ್‌ ಎಂದರು.

Also Read  ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್

error: Content is protected !!
Scroll to Top