ಜಾತಿಗಣತಿ ವರದಿ :’ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ’ – ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಜ.15 :  ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Nk Cake House

ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು.

Also Read  ಸುಳ್ಯ: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸಭೆ

ಎಐಸಿಸಿ ಕಚೇರಿ ಉದ್ಘಾಟನೆ

ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.

error: Content is protected !!
Scroll to Top