(ನ್ಯೂಸ್ ಕಡಬ) newskadaba.com:ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಜನವರಿ ೧೫ ರಂದು ನಡೆದಿದೆ. ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ.
ಗೆಳೆಯರೊಂದಿಗೆ ಆಡುತ್ತಿದ್ದಾಗ ಶಹೀಮ್ ಅವರು ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಮುಂದುವರಿಸುತ್ತಿದ್ದರು.
Also Read ಬಬ್ರುವಾಹನವಾಗಿ ಆಕರ್ಷಿಸಿದ ಪಂಜದ 4 ವರ್ಷದ ಪೋರ ಪುಟಾಣಿಯ ಅಭಿನಯಕ್ಕೆ ನಟ ಪುನೀತ್ ರಾಜ್ ಕುಮಾರ್ ಫಿದಾ...⁉️