ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ದಾಳಿ; ಚೂರಿ ಇರಿತ

(ನ್ಯೂಸ್ ಕಡಬ) newskadaba.com: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಚಾಕು ಇರಿದ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದೆ. ದರೋಡೆಗೆ ಬಂದಿದ್ದ ದುಷ್ಕರ್ಮಿಗಳು ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಸೈಫ್ ಅಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ. ಪತ್ನಿ ನಟಿ ಕರೀನಾ ಕಪೂರ್ ಮತ್ತು ಇಬ್ಬರೂ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

Also Read  ಕಾಶ್ಮೀರ: ಕಳೆದ ಐದು ದಿನಗಳಿಂದ ಹಿಮದಲ್ಲಿ ಸಿಲುಕಿ ಯೋಧ  ನಾಪತ್ತೆ


ಘಟನೆಯ ಕುರಿತಂತೆ ಮುಂಬೈ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ತನಿಖೆಯ ಅಂಗವಾಗಿ ನಟನ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Nk Cake House

error: Content is protected !!