ಮುಂಬೈ ರಸ್ತೆ ಅಪಘಾತ; ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ

(ನ್ಯೂಸ್ ಕಡಬ) newskadaba.com ಜ. 18 ಮುಂಬೈ: ‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.\

ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಕ್ ಚಾಲಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

error: Content is protected !!
Scroll to Top