(ನ್ಯೂಸ್ ಕಡಬ) newskadaba.com ಜ.18 : ಮೈಸೂರು: ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದೊಳಗಿನ ಎಲ್ಲಾ ಗೊಂದಲಗಳು ಬಗೆಹರಿಯುತ್ತವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದರಿಂದ ಪಕ್ಷದೊಳಗಿನ ಭಿನ್ನಾಭಿಪ್ರಾಯ ಕಡಿಮೆಯಾಗುತ್ತವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಅಧ್ಯಕ್ಷನಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದೇನೆ. ಅದನ್ನು ಸಂಘಟಿಸಲು ಮತ್ತಷ್ಟು ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳ ಬಗ್ಗೆ ಕೇಳಿದಾಗ, ಪಕ್ಷದ ಹಿರಿಯ ನಾಯಕರು ಪಕ್ಷವನ್ನು ಮೂಲದಿಂದ ಕಟ್ಟಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ದಾಳಿ ಮಾಡುವಾಗ ಅಥವಾ ಟೀಕಿಸುವಾಗ ಜಾಗರೂಕರಾಗಿರಬೇಕು, ಅಂತಹ ಹೇಳಿಕೆಗಳು ಪಕ್ಷದ ಕಾರ್ಯಕರ್ತರಿಗೆ ನೋವುಂಟು ಮಾಡಬಹುದು ಎಂದು ಹೇಳಿದರು.