ಮಣಿಪುರದ ಕಾಂಗ್‌ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಜ.20 : ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

 

ನ್ಯೂ ಕೀಥೆಲ್ಯಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಲುಂಖೋಂಗ್‌ಜಾಂಗ್ ರಿಡ್ವಸ್‌ನಲ್ಲಿ ಈ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. 7.62 ಎಂಎಂ ಸ್ಟೈಪರ್ ರೈಫಲ್, ಐದು ಪಿಸ್ತೂಲ್‌ಗಳು, ಎರಡು ಎಸ್‌ಬಿಬಿಎಲ್ ಗನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು ಹಾಗೂ ಅಶ್ರುವಾಯು ಶೆಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Scroll to Top