ಅಮಿತ್ ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಜ.20  ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.

ಇದೇ ವೇಳೆ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಂಧಿ ಸಲ್ಲಿಸಿದ ಮನವಿ ಸಂಬಂಧ ಜಾರ್ಖಂಡ್ ಸರ್ಕಾರ ಮತ್ತು ದೂರುದಾರ ಬಿಜೆಪಿ ಕಾರ್ಯಕರ್ತ ನವೀನ್ ಝಾ ಪ್ರತಿಕ್ರಿಯೆಯನ್ನು ಕೇಳಿದೆ. ಜೊತೆಗೆ 4 ವಾರಗಳಲ್ಲಿ ಉತ್ತರಿಸುವಂತೆ ಪೀಠ ನೋಟಿಸ್ ಜಾರಿ ಮಾಡಿದೆ. ರಾಹುಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಪ್ರಕರಣದಲ್ಲಿ 3ನೇ ವ್ಯಕ್ತಿಯಿಂದ ದೂರು ದಾಖಲಿಸಲಾಗಿದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಷಯದಲ್ಲಿ ಈ ರೀತಿ ಮೂರನೇ ವ್ಯಕ್ತಿ ದೂರು ದಾಖಲಿಸುವುದನ್ನು ಅನುಮತಿಸಲಾಗದು. ಅಲ್ಲದೇ ನೀವು ಬಾಧಿತ ವ್ಯಕ್ತಿಯಲ್ಲದಿದ್ದರೆ, ನೀವು ಹೇಗೆ ಪ್ರಾಕ್ಸಿ ದೂರು ಸಲ್ಲಿಸಬಹುದು? ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದ್ದಾರೆ.

Also Read  ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ IPS ಅಧಿಕಾರಿ ಸಿಬಿ ರಿಷ್ಯಂತ್ ನೇಮಕ

error: Content is protected !!
Scroll to Top