ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್

(ನ್ಯೂಸ್ ಕಡಬ) newskadaba.com ಜ.21 ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಶಾಸಕ ಮುನಿರತ್ನ ಮೇಲೆ ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ  ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿರುವ ಮುನಿರತ್ನ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಜೊತೆಗೆ ಮುನಿರತ್ನ ರಾಜಕೀಯ ಜೀವನಕ್ಕೆ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣ ಮುಳ್ಳಾಗಿದ್ದು, ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ಗಂಭೀರ ಆರೋಪದ ದೂರು ನೀಡಲಾಗಿದೆ.

Also Read  ರೈತರಿಗೆ ಗುಡ್ ನ್ಯೂಸ್➤ರಸಗೊಬ್ಬರ ಸಬ್ಸಿಡಿಗೆ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ನಿರ್ಧರಿಸಿದ ಸರ್ಕಾರ

error: Content is protected !!
Scroll to Top