ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‌ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ತಕ್ಷಣ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಗನ್ ಲೈಸೆನ್ಸ್ ಕೂಡ ರದ್ದು ಮಾಡಬಹುದಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬರದ ಹಿನ್ನೆಲೆ ತಾತ್ಕಾಲಿಕವಾಗಿ ಅಂದರೆ ಕೇಸ್ ಮುಗಿಯುವತನಕ ಅಮಾನತ್ತಿನಲ್ಲಿಡಲು ಪೊಲೀಸರು ನಿರ್ಧಾರ ಮಾಡಿದ್ದಾರೆ.

ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರೋದ್ರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಗನ್ ಲೈಸೆನ್ಸ್ ರದ್ದು ಮಾಡಬೇಕಿದೆ. ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು ಎಂದು ದರ್ಶನ್‌ಗೆ ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರ ನೋಟಿಸ್‌ಗೆ ಉತ್ತರಿಸಿದ್ದ ದರ್ಶನ್, ನಾನು ಸೆಲೆಬ್ರಿಟಿ ಆಗಿರುವುದರಿಂದ ಆತ್ಮರಕ್ಷಣೆಗೆ ಗನ್ ಅವಶ್ಯಕತೆ ಇದೆ. ನನ್ನ ಮೇಲಿರೋ ಕೇಸ್‌ನ ಸಮಯದಲ್ಲಿ ಆ ಗನ್ ಬಳಕೆ ಮಾಡಿಲ್ಲ. ಯಾವುದೇ ಕಾರಣಕ್ಕೂ ಗನ್ ದುರ್ಬಳಕೆ ಮಾಡಿಕೊಳ್ಳಲ್ಲ. ಹಾಗಾಗಿ ಗನ್ ಲೈಸೆನ್ಸ್ ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು.

Also Read  ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ- ದರ್ಶನ್ ಸೇರಿ ಮೂವರ ವಿರುದ್ಧ FIR ದಾಖಲು

error: Content is protected !!
Scroll to Top