‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’- ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ರಾಜ್ಯದಲ್ಲಿ ನಡೆದ ಸಾಲು-ಸಾಲು ದರೋಡೆ ಪ್ರಕರಣಗಳ ವಿಚಾರವಾಗಿ ಮಾತನಾಡಿದ ಅವರು, ಪೊಲೀಸರನ್ನು ಯಕ್ಷಗಾನ ತಡೆಯುವುದಕ್ಕೆ ನಿಯೋಜನೆ ಮಾಡುವುದು ಬೇಡ. ಸಿ.ಟಿ ರವಿ ಅವರನ್ನು ಪೊಲೀಸರ ಮೂಲಕ ಊರೆಲ್ಲಾ ತಿರುಗಿಸಿ ಏನೋ ಸಾಧನೆ ಮಾಡಿದ್ದೇವೆ ಎಂಬ ಭ್ರಮೆ ಬೇಡ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿರೋಧ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇದ್ರೆ ಪಕ್ಷದ ಮೇಲೆ ಮಾತ್ರ ಪರಿಣಾಮ ಬೀರುತ್ತೆ. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇರಬಾರದು. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಜೋರಾದ್ರೆ ಜನರಿಗೆ ತೊಂದರೆ ಆಗುತ್ತದೆ ಎಂದಿದ್ದಾರೆ.

Also Read  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ ಇದರ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಕಾಂಗ್ರೆಸ್‌ನಲ್ಲಿ ಒಂದು ಕಡೆ ಟಗರು ಮತ್ತೊಂದು ಕಡೆ ಬಂಡೆ ಗುದ್ದಾಡ್ತಾ ಇದ್ರೆ ಜನರಿಗೆ ತೊಂದರೆ ಆಗುತ್ತೆ. ಬಿಜೆಪಿ ಪಕ್ಷದಲ್ಲಿನ ಆಂತರಿಕ ಕಲಹದ ಬಗ್ಗೆ ಇಂದು ಅಥವಾ ನಾಳೆ ಎಲ್ಲವೂ ಕೂಡ ಸರಿ ಹೋಗಲಿದೆ ಎಂದು ಹೇಳಿದ್ದಾರೆ.

error: Content is protected !!
Scroll to Top