ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ

(ನ್ಯೂಸ್ ಕಡಬ) newskadaba.com ಜ.22 ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಬಂಧಿತ ವ್ಯಕ್ತಿ ಅತೀಕ್ ಅಹ್ಮದ್ ನನ್ನು ಜನವರಿ 20 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಎಂದು ಗುರುತಿಸಲಾದ ಅಹ್ಮದ್, ಜುಲೈ 2022 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನಡೆದ ಕೊಲೆಯ ನಂತರ ತಲೆಮರೆಸಿಕೊಂಡಿದ್ದ.

Also Read  ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ

ಜುಲೈ 2022 ರಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಎಂಬಾತನನ್ನು ಬರ್ಬರವಾಗಿ ಕೊಂದ ಪ್ರಕರಣದಲ್ಲಿ ಅತೀಕ್ ಅಹಮದ್ 21 ನೇ ಆರೋಪಿಯಾಗಿದ್ದಾನೆ.

error: Content is protected !!
Scroll to Top