ಹೊನ್ನಾವರ ಗೋಹತ್ಯೆ ಪ್ರಕರಣ ಬಳಿಕ ಎಚ್ಚೆತ್ತ ಸರ್ಕಾರ: ಜಾನುವಾರು ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದು, 6 ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಜ.22 ಹೊನ್ನಾವರ : ಹೊನ್ನಾವರದಲ್ಲಿ ಗರ್ಭಿಣಿ ಹಸುವನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಾನುವಾರು ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು 6 ತಂಡಗಳ ರಚನೆ ಮಾಡಿ ತನಿಖೆಯನ್ನು ತೀವ್ರಗೊಳ್ಳುವಂತೆ ಮಾಡಿದೆ. ಸಾಲ್ಕೋಡು ಪಂಚಾಯಿತಿಯಲ್ಲಿ ನಡೆದ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ ಅವರು ಉತ್ತರ ಕನ್ನಡ ಐಜಿ ಮತ್ತು ಎಸ್ಪಿ ಅವರೊಂದಿಗೆ ಸಭೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಅದರಂತೆ, ಅಕ್ರಮ ಗೋಮಾಂಸ ಸಾಗಣೆಯನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಈ ಹಿಂದೆ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಎಲ್ಲರನ್ನು ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

Also Read  ಕಂಬಳದ 'ಹೀರೋ' ಶ್ರೀನಿವಾಸ ಗೌಡರನ್ನು ಸನ್ಮಾನಿಸಿದ ಯಡಿಯೂರಪ್ಪ

ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಎಂ ನಾರಾಯಣ್ ಅವರು ಮಾತನಾಡಿ. ಪ್ರಕರಣ ಸಂಬಂಧ ಐದು ಜನರನ್ನು ವಿಚಾರಣೆಗೊಳಪಡಿಸಲಾಗಿದೆ. ಆದರೆ, ಇದೂವರೆಗೂ ಯಾರನ್ನೂ ಬಂಧನಕ್ಕೊಳಪಡಿಸಿಲ್ಲ. ಘಟನೆ ನಡೆದ ಸ್ಥಳವು ಅರಣ್ಯ ಪ್ರದೇಶವಾಗಿರುವುದರಿಂದ ತನಿಖೆ ವೇಳೆ ದ್ವಿತೀಯ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇವೆ, ಅರಣ್ಯಾಧಿಕಾರಿಗಳೂ ಕೂಡ ಸ್ಥಳೀಯರ ಮಾಹಿತಿ ಪಡೆಯುತ್ತಿದ್ದಾರೆ. ಅಕ್ರಮ ಗೋಸಾಗಣೆ ಕಂಡು ಬಂದರೆ ಮಾಹಿತಿ ನೀಡುವಂತೆ ಜನರಿಗೆ ತಿಳಿಸಲಾಗಿದೆ. ಪ್ರಕರಣವನ್ನು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಿದ್ದು, ಮೇಲ್ವಿಚಾರಣೆ ಮಾಡುತ್ತಿದ್ದಾರೆಂದು ಹೇಳಿದ್ದಾರೆ.

Also Read  ಇಂದೇ ನಿಮಗಿಷ್ಟದ ಬೈಕ್ ಖರೀದಿಸಿ, 2021ರಲ್ಲಿ ಹಣ ಪಾವತಿಸಿ...!! ➤ ಕಡಬದ ಅಡಿಗ ಟಿವಿಎಸ್ ನಿಂದ ಕೊರೋನಾ ಹಿನ್ನೆಲೆಯಲ್ಲಿ ವಿನೂತನ ಆಫರ್

error: Content is protected !!
Scroll to Top