ಮುಡಾ ಹಗರಣ ಪ್ರಕರಣ – ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

(ನ್ಯೂಸ್ ಕಡಬ) newskadaba.com ಜ.23  ಬೆಂಗಳೂರು: ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ವರದಿ ಕೂಡ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಯವರಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬುವುದಾಗಿ ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಮುಡಾ ಆಯುಕ್ತರು, ರೆವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ ಎಂದು ಹೇಳಲಾಗಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದಿನ ಕ್ರಮದ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ಹೇಳಲಾಗಿದೆ. ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

Also Read  ಹೊಸ ಸ್ಮಾರ್ಟ್​​​ವಾಚ್​ ಲಾಂಚ್ ಮಾಡಿದ ಫಾಸ್ಟ್ರಾಕ್​ ಕಂಪೆನಿ​ !

error: Content is protected !!
Scroll to Top