ಕರ್ನಾಟಕದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬೆಂಗಳೂರಿನಲ್ಲಿ ವರದಿ: ಆರೋಗ್ಯ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.23  ಬೆಂಗಳೂರು: ರಾಜ್ಯದಲ್ಲಿ ಈ ವರ್ಷದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ನಿನ್ನೆ ಬುಧವಾರ ತಡರಾತ್ರಿ ಬೆಂಗಳೂರಿನಲ್ಲಿ ವರದಿಯಾಗಿದೆ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ದೃಢವಾಗಬೇಕಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ವರದಿಯಾಗಿತ್ತು. ಕಳೆದ ತಿಂಗಳು, ಕೇರಳದಲ್ಲಿ ಎರಡು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದವು.

ಕಳೆದ ವರ್ಷ ಕೆಲವು ಆಫ್ರಿಕನ್ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗಿದ್ದವು. ನಂತರ ಪಾಕಿಸ್ತಾನ ಮತ್ತು ಥಾಯ್ಲೆಂಡ್ ಸೇರಿದಂತೆ ಇತರ ದೇಶಗಳಲ್ಲಿ ಪ್ರಕರಣಗಳು ವರದಿಯಾಗಲು ಪ್ರಾರಂಭಿಸಿದಾಗ ಮಂಕಿಪಾಕ್ಸ್ ಬಗ್ಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಆತಂಕ ಸೃಷ್ಟಿಯಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್​ ನ್ನು ಕಳೆದ ವರ್ಷ ‘ಅಂತಾರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿತ್ತು.

Also Read  ಮಂಗಳೂರು: ಕೊರಗಜ್ಜನ ಕೃಪೆಯಿಂದಲೇ ನಾನು ಬಿಗ್ ಬಾಸ್ ಗೆದ್ದೆ…!! ➤  ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

error: Content is protected !!
Scroll to Top