(ನ್ಯೂಸ್ ಕಡಬ) newskadaba.com ಜ.23 ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಬರುವ ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ.
ರಾಜ್ಯದ ಅರಣ್ಯ ಪ್ರದೇಶದಲ್ಲಿನ ಹುಲಿ-ಆನೆಯಂತಹ ವನ್ಯ ಜೀವಿಗಳನ್ನು ಕಾಲಕಾಲಕ್ಕೆ ಗಣತಿ ಮಾಡಲಾಗುತ್ತದೆ. ಆದರೆ, ಇದೀಗ ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿ ಕೊಂಡಂತಿರುವ ಈ ವನ್ಯಜೀವಿಧಾಮ, 906 ಚದರ ಕಿ.ಮೀ. ವಿಸ್ತೀರ್ಣದ ಅರಣ್ಯ ಪ್ರದೇಶ ಹೊಂದಿದೆ.