ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಶೀಘ್ರವೇ MRI ಸ್ಕ್ಯಾನಿಂಗ್ ಸೌಲಭ್ಯ ಜಾರಿ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು:ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಶೀಘ್ರವೇ MRI ಸ್ಕ್ಯಾನಿಂಗ್ ಕೇಂದ್ರ ಸ್ಥಾಪಿಸಲು ತೀರ್ಮಾನಿಸಿದ್ದು, ಇನ್ನು ಎರಡು ತಿಂಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಅವರು ಬಿಡದಿಯಲ್ಲಿ ಮಾತನಾಡಿ, ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ ಸ್ಕ್ಯಾನಿಂಗ್ ಯಂತ್ರವನ್ನು ದುರಸ್ತಿ ಪಡಿಸಲು 30 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಹಾಗೆಯೇ ಇನ್ನೆರಡು ತಿಂಗಳ ಅವಧಿಯಲ್ಲಿ MRI ಸ್ಕ್ಯಾನಿಂಗ್ ವ್ಯವಸ್ಥೆ ಸಹ ಕಲ್ಪಿಸಲಾಗುವುದು, ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರು, ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Also Read  ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ

error: Content is protected !!
Scroll to Top