ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ) newskadaba.com ಜ.24 ಮುಂಬೈ: ದರ್ಶನ್‌ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

Also Read  ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ

ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆಪೊಲೀಸರು ಅರ್ಜಿ ಸಲ್ಲಿಸಿದ್ದರು. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.

error: Content is protected !!
Scroll to Top