(ನ್ಯೂಸ್ ಕಡಬ) newskadaba.com ಜ.24 ಮುಂಬೈ: ರಕ್ಷಣಾ ಉತ್ಪನ್ನಗಳನ್ನ ತಯಾರಿಸುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಮಹಾರಾಷ್ಟ್ರದ ನಾಗ್ಬುರ ಬಳಿಯಿರುವ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಐವರು ಮೃತಪಟ್ಟಿರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಸದ್ಯ ಅಗ್ನಿಶಾಮ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡುತ್ತಿದ್ದು, ರಕ್ಷಣಾ ತಂಡಗಳು ಬದುಕುಳಿದವರಿಗಾಗಿ ಶೋಧ ನಡೆಸುತ್ತಿದೆ. ಇನ್ನು ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡಿತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಸ್ಫೋಟದ ಸಮಯದಲ್ಲಿ ಛಾವಣಿ ಕುಸಿದಿದ್ದು ಅದರ ಅಡಿಯಲ್ಲಿ 12 ಮಂದಿ ಸಿಲುಕಿಕೊಂಡಿದ್ದರು. ಈ 12 ಮಂದಿ ಪೈಕಿ ಇಬ್ಬರನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ಉಳಿದವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇನ್ನೂ ಸ್ಫೋಟದ ಶಬ್ಧ 5 ಕಿಮೀ ವರೆಗೆ ಕೇಳಿಸಿದೆ. ಸ್ಥಳದಲ್ಲಿ ದಟ್ಟ ಹೊಗೆ ವ್ಯಾಪಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.