ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಇಂದು ಹುಟ್ಟಿದ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್!

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು : ಇಂದು ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಇಂದು ಹುಟ್ಟುವ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲಿದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ಗುಲಾಬಿ ಬಣ್ಣದ ದೀಪಾಲಂಕಾರ ಮಾಡಲು ಮತ್ತು ಇಂದು ಶುಕ್ರವಾರ ಜನಿಸುವ ಹೆಣ್ಣು ಮಕ್ಕಳಿಗೆ ತಲಾ 1,000 ರೂ, ಮೌಲ್ಯದ ಕಿಟ್ ಉಡುಗೊರೆ ಗಿಫ್ಟ್ ನೀಡಲು ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ ಶುಭಕೋರಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧ ಎಂದಿದ್ದಾರೆ. ಹೆಣ್ಣು ಮಕ್ಕಳ ಆರೋಗ್ಯ ಕಾಪಾಡುವ ವಿಚಾರದಲ್ಲಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಅನಿಮೀಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆ ಹೆಣ್ಣುಮಕ್ಕಳ ರಕ್ತ ಹೀನತೆ ಹೋಗಲಾಡಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ಶುಚಿ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನ ಜಾರಿಗೊಳಿಸದೆ. ವಿಶೇಷವಾಗಿ ಹೆಣ್ಣುಭ್ರೂಣ ಹತ್ಯೆಗಳನ್ನ ನಡೆಸುವವರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Also Read  ಕನ್ಯಾ ರಾಶಿಯವರಿಗೆ ಹಣ ಹೂಡಿಕೆಗೆ ಇಂದು ಉತ್ತಮ ದಿನ - ಉಳಿದ ರಾಶಿಯ ಬಗ್ಗೆ ತಿಳಿಯಿರಿ

error: Content is protected !!
Scroll to Top