ಪ್ರಯಾಗ್‌ರಾಜ್‌ನಲ್ಲಿ ಮತ್ತೆ ಬೆಂಕಿ ಅವಘಡ-ಹೊತ್ತಿ ಉರಿದ ಕಾರುಗಳು!

(ನ್ಯೂಸ್ ಕಡಬ) newskadaba.com ಜ.25 ಲಖನೌಉತ್ತರ ಪ್ರದೇಶದಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಇಂದು ಮುಂಜಾನೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಪ್ರಯಾಗ್‌ರಾಜ್‌ನ ಮುಖ್ಯ ರಸ್ತೆಯ ಸೆಕ್ಟರ್-2ರ ಬಳಿ ನಿಲ್ಲಿಸಿದ್ದ ಎರಡು ಕಾರುಗಳು ಬೆಂಕಿಗಾಹುತಿಯಾಗಿವೆ.ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ ಎನ್ನಲಾಗಿದೆ.

ಬೆಂಕಿ ಅವಘಡದ ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಿ ಹೆಚ್ಚಿನ ಅಗ್ನಿ ದುರಂತವನ್ನು ತಪ್ಪಿಸಿದೆ. ಈ ಅವಘಡದಲ್ಲಿ ಎರಡೂ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಸುತ್ತಮುತ್ತಲಿನ ವಾಹನಗಳನ್ನು ತೆರವುಗೊಳಿಸಲಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Also Read  ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

error: Content is protected !!
Scroll to Top