ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ

(ನ್ಯೂಸ್ ಕಡಬ)com ಜ.25 ಪ್ರಯಾಗ್ ರಾಜ್: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿನ ಮಂಗಳೂರು- ಬೆಂಗಳೂರು ರಾ ಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಈ ಸಂದರ್ಭ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ್ದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿತ್ತು. ಈ ನಡುವೆ ಟ್ಯಾಂಕರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ ಅದರ ಚಾಲಕ ಕನಕರಾಜು ಎಂಬವರು ಟ್ಯಾಂಕರನ್ನು ಬೊಳ್ಳಾರು ಎಂಬಲ್ಲಿನ ಇಳಿಜಾರು ಪ್ರದೇಶದಲ್ಲಿ ರಸ್ತೆ ಬದಿ ನಿಲ್ಲಿಸಿ ಮೆಕ್ಯಾನಿಕ್ ಅನ್ನು ಕರೆದುಕೊಂಡು ಬರಲು ಹೋಗಿದ್ದರು. ಅವರು ಹೋದ ಕೆಲವೇ ಕ್ಷಣಗಳಲ್ಲಿ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿ ಮಗುಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳದವರು ಹಾಗೂ ಉಪ್ಪಿನಂಗಡಿ ಪೊಲೀಸರು ತೆರಳಿ ಪರಿಶೀಲಿಸಿದ್ದಾರೆ.

Also Read  Mostbet Apostas Desportivas E Casino Online Site Oficial Em Nosso País Obter Bônus 1600 R$ Enta

error: Content is protected !!
Scroll to Top