ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.25  ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಕಿರುಕುಳ ನೀಡುತ್ತಿವೆ ಎಂದು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಜಿ. ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

Also Read  ದಸರಾ ಒಳಗಡೆಯೇ ಗೃಹಲಕ್ಷ್ಮಿ ಹಣ ಜಮೆ

ಮೈಕ್ರೋಫೈನಾನ್ಸ್ ಕಂಪನಿಗಳ ಸಂಘದ ಪ್ರತಿನಿಧಿಗಳು, ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಾದೇಶಿಕ ಅಧಿಕಾರಿಗಳು ಮತ್ತು ನಬಾರ್ಡ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

error: Content is protected !!
Scroll to Top