(ನ್ಯೂಸ್ ಕಡಬ) newskadaba.com ಜ.27 ಬೆಳಗಾವಿ: ಅಲೆವೂರು ಗುಡ್ಡೆಯಂಗಡಿಯಲ್ಲಿನ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ.
ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ.
ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.