ಉಡುಪಿ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಪತ್ತೆ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಇತ್ತೀಚೆಗೆ ಉಡುಪಿಯ ಪಿಪಿಸಿ ಸಮೀಪದ ಓಣಿಯಲ್ಲಿ ನಡೆದ 5 ವರ್ಷದ ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಸ್ಕೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣದ ಆರೋಪಿಯು ಅಪರಿಚಿತನಾಗಿದ್ದರಿಂದ, ಆರೋಪಿಯ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಿದ್ದರು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ತಿಳಿಸಲಾಗಿತ್ತು.

Also Read  ಪಿಲಿಕುಲದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ "ಹುಲಿ ರಾಣಿ"

ಸಾರ್ವಜನಿಕರ ಸಹಾಯ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಪ್ರಯತ್ನದಿಂದಾಗಿ ಭಾನುವಾರ ಸಂಜೆ ಆರೋಪಿ ಬಾಗಲಕೋಟೆಯ ಹುನಗುಂದದ ಮುತ್ತು (35) ಎಂಬಾತನ್ನನು ಶ್ರೀಕೃಷ್ಣ ಮಠದ ಪರಿಸರದ ಸಮೀಪ ಪತ್ತೆ ಮಾಡಲಾಗಿದೆ.

error: Content is protected !!
Scroll to Top