ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಜ.27  ಉಡುಪಿ:  ಬೆಳ್ಳಂಬೆಳಗ್ಗೆ ಉಡುಪಿಯ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆಯ ಇಮೇಲ್‌ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸ್ಥಳಕ್ಕೆ ಪೊಲೀಸರಿಗೆ ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಯಾವುದೇ ಸಂಶಯಾಸ್ಪದ ವಸ್ತು ಪತ್ತೆಯಾಗಿಲ್ಲ.

ಉಡುಪಿಯ ಶಾರದಾ ಇಂಟರ್‌ನ್ಯಾಷನಲ್‌ ವಸತಿ ಶಾಲೆಗೆ ಇಮೇಲೆ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಇಲ್ಲಿ ರಾಜ್ಯದ ವಿವಿಧ ಭಾಗಗಳ, ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಾಂಬ್‌ ಬೆದರಿಕೆಯ ಸಂದೇಶ ಬರುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಪೊಲೀಸ್‌ ಠಾಣೆಗೆ ದೂರು ನೀಡಿದೆ. ಕೂಡಲೇ ಪೊಲೀಸ್‌, ಶ್ವಾನ ಪತ್ತೆ ದಳದ ಸಿಬ್ಬಂದಿ, ಬಾಂಬ್‌ ನಿಷ್ಕ್ರಿಯ ದಳದ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Also Read  ಉಳ್ಳಾಲ: ಯುವಕರಿಬ್ಬರು ಸಮುದ್ರಪಾಲು

ʼʼಪರಿಶೀಲನೆ ವೇಳೆ ಯಾವುದೇ ಸಂಶಯಾಸ್ಪದ ವಸ್ತು ಕಂಡು ಬಂದಿಲ್ಲ. ಶಾಲೆಯ ಮೂಲೆ ಮೂಲೆಯಲ್ಲಿಯೂ ಪರಿಶೀಲನೆ ನಡೆಸಿದ್ದೇವೆ. ಇಮೇಲ್‌ ಎಲ್ಲಿಂದ ಬಂದಿದೆ ಎನ್ನುವ ಕುರಿತು ತನಿಖೆ ನಡೆಸುತ್ತೇವೆ. ಆತಂಕ ಪಡುವ ಅಗತ್ಯವಿಲ್ಲʼʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

error: Content is protected !!
Scroll to Top