(ನ್ಯೂಸ್ ಕಡಬ) newskadaba.com ಜ.27 ಮೈಸೂರು: ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.