ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ

(ನ್ಯೂಸ್ ಕಡಬ) newskadaba.com ಜ.28: ಮಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಮೈಲಿಗಲ್ಲು ಸ್ಥಾಪಿಸಿರುವ ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಯುಎಸ್ ಎಯಲ್ಲಿ ಅಭಿವೃದ್ದಿ ಪಡಿಸಲಾದ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿಯನ್ನು ಮಂಗಳೂರಿಗೆ ಪರಿಚಯಿಸಿದೆ. ಸ್ಮಿತ್ ಪ್ಲಸ್ ನೆವ್ಯೂದವರು ಅಭಿವೃದ್ದಿ ಪಡಿಸಿರುವ ಈ ಸುಧಾರಿತ ಶಸ್ತ್ರ ಚಿಕಿತ್ಸಾ ಸೌಲಭ್ಯವನ್ನು ಡಾ. ಎ.ಜೆ.ಶೆಟ್ಟಿ ಅವರು ಉದ್ಘಾಟಿಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಹೇಳಿದ್ದಾರೆ.

ಈ ವ್ಯವಸ್ಥೆಯ ಮೂಲಕ ರೋಗಿಗಳಿಗೆ ಉತ್ತಮ ಶಸ್ತ್ರ ಚಿಕಿತ್ಸಾ ಫಲಿತಾಂಶ ಹಾಗೂ ವೇಗವಾಗಿ ಚೇತರಿಕೆಗೆ ದಾರಿ ಮಾಡಿಕೊಡುತ್ತದೆ. ಈ ಹಿಂದೆಯೂ ಹಲವು ತಂತ್ರಜ್ಞಾನಗಳನ್ನು ಮೊದಲು ಮಂಗಳೂರಿಗೆ ಪರಿಚಯಿಸಿದ ಎಜೆ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ಇದೀಗ ಪರಿಚಯಿಸಿರುವ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ತಂತ್ರಜ್ಞಾನ ಕೂಡ ಎಜೆ ಆಸ್ಪತ್ರೆಯ ಗರಿಮೆಯನ್ನು ಹೆಚ್ಚು ಮಾಡಿದೆ ಎಂದು ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಡಾ.ಸುದೀಪ್ ಶೆಟ್ಟಿ, ಡಾ.ಮಯೂರ್ ರೈ, ಡಾ.ಮಿಥುನ್ ಶೆಟ್ಟಿ ಉಪಸ್ಥಿತರಿದ್ದರು.

Also Read  ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ

error: Content is protected !!
Scroll to Top