‘ಮುಡಾ ಹಗರಣದಲ್ಲಿ ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ’- ಬೈರತಿ ಸುರೇಶ್

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಸಿಎಂ ಸಿದ್ದಯಾಮಯ್ಯ ಅವರ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ಇಡಿ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿರುವ ಸಂಬಂಧ ಮಾತನಾಡಿದ ಅವರು, ಆ ರೀತಿ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು ಫೆ.10 ರ ನಂತರ ನೋಡೋಣ ಎಂದು ಹೇಳಿದರು.

ನಾನು ಮತ್ತು ಕಾಂಗ್ರೆಸ್ ಪಕ್ಷ ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ಯಾಕೆ ನೋಟಿಸ್ ನೀಡಿದ್ದಾರೆ ಎಂಬುದಕ್ಕೆ ಇಡಿ ಮತ್ತು ಸಿಬಿಐ ಅವರನ್ನೇ ಕೇಳಬೇಕು ಎಂದರು. ನನಗೆ ನೋಟಿಸ್ ಬಂದಾಗ ಆಶ್ಚರ್ಯವಾಯ್ತು. ಹಗರಣ ನಡೆದಾಗ ನಾನು ಮಂತ್ರಿ ಆಗಿರಲಿಲ್ಲ. ಸೈಟನ್ನು ಪಡೆದಿಲ್ಲ, ಕೊಟ್ಟಿಲ್ಲ. ಸೈಟ್ ಹಂಚಿಕೆ ಗೊಂದಲ ಆದ ಮೇಲೆ ಸೈಟ್ ವಾಪಸ್ ಕೂಡ ಕೊಟ್ಟಿದ್ದಾರೆ. ಇದೆಲ್ಲ ನ್ಯಾಯಮೂರ್ತಿಗಳಿಗೆ ಮನದಟ್ಟಾಗಿದೆ ಹಾಗಾಗಿ ಸ್ಟೇ ಕೊಟ್ಟಿದ್ದಾರೆ. ನನಗೆ ಕೊಟ್ಟಿರುವುದು ಒಂದೇ ನೋಟಿಸ್, ಸಿಎಂ ಪತ್ನಿಗೆ ಎರಡನೇ ನೋಟಿಸ್ ಕೊಟ್ಟಿದ್ದಾರಾ ಎಂದು ನನಗೆ ಗೊತ್ತಿಲ್ಲ ಎಂದು ನುಡಿದರು.

Also Read  ಮೈಸೂರು ದಸರಾ 2024-  'ಯುವ ಸಂಭ್ರಮ'ದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ

error: Content is protected !!
Scroll to Top