ಜಾತಿ ದೌರ್ಜನ್ಯ ಕೇಸಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸಿ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜ.29. ಬೆಂಗಳೂರು: ಜಾತಿ ದೌರ್ಜನ್ಯ (ಅಟ್ರಾಸಿಟಿ) ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10ಕ್ಕಿಂತ ಹೆಚ್ಚಾಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಅಟ್ರಾಸಿಟಿ ಪ್ರಕರಣಗಳ ಕುರಿತು ಜಿಲ್ಲಾಧಿಕಾರಿಗಳು ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಬೇಕು ಹಾಗೂ ದೌರ್ಜನ್ಯ ಎಸಗಿದವರಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ವಿಫಲ ರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಸಿದ್ದರಾಮಯ್ಯ ಅವರು ತಮ್ಮ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಿದರು.
ಸಭೆಯಲ್ಲಿ ಪ್ರಮುಖವಾಗಿ ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಗುತ್ತಿದೆ. ಅಂತಹ ಪ್ರಕರಣಗಳಲ್ಲಿ ಮೇಲ್ಮನವಿಗೆ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ಎಂದು ಪ್ರಶ್ನಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಾಗೆಯೇ, ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ದೌರ್ಜನ್ಯ ಎಸಗಿದವರಿಂದ ಪ್ರತಿದೂರು ಪಡೆದು ಪ್ರಕರಣ ದುರ್ಬಲಗೊಳಿಸುತ್ತಿರುವ ದೂರುಗಳಿವೆ. ಅದು ಹೀಗೆ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Also Read  ಕಡಬದಲ್ಲಿ ಸ್ವಚ್ಚಮೇವ ಜಯತೇ ಆಂದೋಲನ ಜಾಥಾ

error: Content is protected !!
Scroll to Top