ಕೇಂದ್ರ ಬಜೆಟ್ 2025: ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಒತ್ತಾಯ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಶನಿವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ 2025ರಲ್ಲಿ ರಾಜ್ಯದಲ್ಲಿನ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮೋದನೆ ನೀಡಬೇಕು. ನಗರಗಳ ನಿರಂತರ ಬೆಳವಣಿಗೆಯನ್ನು ಬೆಂಬಲಿಸಲು ನಿರ್ಣಾಯಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೊಸ ಯೋಜನೆಯನ್ನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿಯಂತಹ ನಗರಗಳು ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ನೀಡುವ ನಗರವಾಗಿ ಮುಂದುವರೆದಿದ್ದು, ತ್ವರಿತ ನಗರೀಕರಣ ಮತ್ತು ದೇಶದ ಇತರ ಭಾಗಗಳಿಂದ ವಲಸಿಗರ ಹೆಚ್ಚಳದಿಂದ ಅವು ಒತ್ತಡವನ್ನು ಎದುರಿಸುತ್ತಿವೆ. ಈ ಪ್ರದೇಶಗಳಲ್ಲಿ ಕೈಗೆಟುಕುವ ದರದಲ್ಲಿ ವಸತಿ, ಸುಸ್ಥಿರ ಸಾರಿಗೆ ವ್ಯವಸ್ಥೆಗಳು, ನೀರು ಸರಬರಾಜು, ಆಧುನಿಕ ನೈರ್ಮಲ್ಯ ಸೌಲಭ್ಯಗಳು, ಗುಣಮಟ್ಟದ ಆರೋಗ್ಯ ಸೇವೆಗಳಂತಹ ಯೋಜನೆಗಳಿಗೆ ಅನುದಾನ ಒದಗಿಸುವ ಮೂಲಕಈ ಸಮಸ್ಯೆಗಳನ್ನು ಪರಿಹರಿಸಲು ಹೊಸ ಯೋಜನೆಗಳತ್ತ ಗಮನ ಹರಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿದ್ದಾರೆ.

Also Read  ಖ್ಯಾತ ಸಿನಿಮಾ ಪತ್ರಕರ್ತ ಮಂಗಳೂರು ಮೂಲದ ರೌಫ್ ಅಹ್ಮದ್ ನಿಧನ

ರಾಜ್ಯದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಹಣ ಮೀಸಲಿಡುವಂತೆಯೂ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕಲ್ಯಾಣ ಕರ್ನಾಟಕವು ಗಮನಾರ್ಹವಾದ ಪ್ರಾದೇಶಿಕ ಅಸಮಾನತೆಗಳನ್ನು ಅನುಭವಿಸುತ್ತಲೇ ಇದೆ. ವಿಶೇಷವಾಗಿ ಮಾನವ ಅಭಿವೃದ್ಧಿ ಸೂಚ್ಯಂಕಗಳಾದ (HDI) ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಗಳ ವಿಷಯದಲ್ಲಿ ಹಿಂದೆ ಬಿದ್ದಿದೆ. ರಾಜ್ಯ ಸರ್ಕಾರ ಈ ಪ್ರದೇಶದ ಅಭಿವೃದ್ಧಿಗೆ ವಾರ್ಷಿಕ 5,000 ಕೋಟಿ ರೂ.ಗಳನ್ನು ವಿನಿಯೋಗಿಸುತ್ತಿದೆ. ಆದರೂ ಅದು ಸಾಕಾಗುತ್ತಿಲ್ಲ. ರಾಜ್ಯಕ್ಕೆ ಹೆಚ್ಚುವರಿ ಆರ್ಥಿಕ ನೆರವು ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ.

error: Content is protected !!
Scroll to Top