ಮಹಾಕುಂಭ ಮೇಳಕ್ಕೆ ಹೋದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಭಕ್ತರು ಕಾಲ್ತುಳಿತದ ನಂತರ ಭಯಭೀತರಾಗಬೇಡಿ. ತಮ್ಮ ಡೇರೆಗಳಲ್ಲಿಯೇ ಸುರಕ್ಷಿತವಾಗಿ ಇರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿರುವ ಭಕ್ತರ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ 80-22340676 ಸಹಾಯವಾಣಿಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು. ಅಲ್ಲದೆ, ಉತ್ತರ ಪ್ರದೇಶ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಐಎಎಸ್ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಲಾಗಿದೆ ಎಂದರು.

Also Read  ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ- ಸಂಸದರ ಪತ್ರಕ್ಕೆ ತುರ್ತು ಸ್ಪಂದಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ, ಹಲವಾರು ಜೀವಗಳನ್ನು ಬಲಿ ಪಡೆದ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದ ದುರಂತದಿಂದ ದುಃಖಿತನಾಗಿದ್ದೇನೆ. ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

error: Content is protected !!
Scroll to Top