ಅಮೆರಿಕನ್ ಏರ್ ಲೈನ್ಸ್ ಅಪಘಾತ: ಇಬ್ಬರ ಮೃತದೇಹ ಹೊರಕ್ಕೆ, ಎಲ್ಲಾ ಪ್ರಯಾಣಿಕರು ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್‌ ನೀಡಿದೆ. ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಎಫ್‌ಐಆರ್‌ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್​​ನಲ್ಲಿ ಗುರುವಾರ (ಜ. 30) ನಡೆಯಿತು. ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ. 20ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಜತೆಗೆ ದೂರು ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

Also Read  ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಬಯಲು- ಸಂಸದ ಕ್ಯಾ. ಬ್ರಿಜೇಶ್ ಚೌಟ

ಸಿ.ಟಿ. ರವಿ ಪರ ವಕೀಲರು ಹೇಳಿದ್ದೇನು?

ಸಿ.ಟಿ. ರವಿ ಪರ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, ʼʼಸದನದೊಳಗೆ ಭೀತಿರಹಿತವಾಗಿ ಮಾತನಾಡಲು ಅವಕಾಶವಿದೆ. ಮಾನನಷ್ಟ ಪ್ರಕರಣದ ಭೀತಿಯಿಲ್ಲದೇ ಚರ್ಚೆ ನಡೆಸಬಹುದು. ಮಹಿಳೆ ಗೌರವಕ್ಕೆ ಧಕ್ಕೆಯಾಗುವ ಮಾತುಗಳಿದ್ದರೂ ಸಭಾಪತಿ ಕ್ರಮ ಕೈಗೊಳ್ಳಬಹುದು. ವಿಧಾನ ಪರಿಷತ್​​ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆʼʼ ಎಂದು ಹೇಳಿದರು.

error: Content is protected !!
Scroll to Top