(ನ್ಯೂಸ್ ಕಡಬ) newskadaba.com ಕಡಬ, ಫೆ.05. ಪುತ್ತೂರು: ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ. ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ (ನೋಂದಣಿ ಸಂಖ್ಯೆ ಕೆಎ-21-ಬಿ-4611) ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ (ನೋಂದಣಿ ಸಂಖ್ಯೆ ಕೆಎ-19-ಎಲ್-2082)ಗೆ ಡಿಕ್ಕಿ ಹೊಡೆದಿದೆ.
ಸವಾರ ಚೇತನ್ ಕುಮಾರ್ ಬೈಕ್ ಓಡಿಸುತ್ತಿದ್ದ ಸಹ ಸವಾರ (10) ಮನೀಶ್ ಸಹ ಸವಾರರಾಗಿ ಕುಳಿತುಕೊಂಡಿದ್ದ. ಡಿಕ್ಕಿಯ ರಭಸಕ್ಕೆ ಇಬ್ಬರೂ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಚೇತನ್ ಅವರಿಗೆ ತೀವ್ರ ಗಾಯಗಳಾಗಿದ್ದು, ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಮೃತಪಟ್ಟಿದ್ದಾರೆ. ಮನೀಶ್ ಕೂಡ ಗಾಯಗೊಂಡಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಆಟೋ ರಿಕ್ಷಾ ಚಾಲಕ ಮೊಹಮ್ಮದ್ ತೌಫಿಕ್ ಕೂಡ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ. 18/2025, ಭಾರತೀಯ ದಂಡ ಸಂಹಿತೆಯ 281, 125(a), ಮತ್ತು 106B ಪ್ರಕರಣ ದಾಖಲಾಗಿದೆ.