ಇನ್ಮುಂದೆ ಮಡಿಕೇರಿಯಲ್ಲಿ ವಾಟರ್ ಬಾಟಲ್ ಸಿಗಲ್ಲ!

(ನ್ಯೂಸ್ ಕಡಬ) newskadaba.com , ಫೆ.07. ಮಡಿಕೇರಿ: ಮಡಿಕೇರಿ ನಗರಸಭೆಯು ಮಡಿಕೇರಿ ನಗರದಲ್ಲಿ ಎರಡು ಲೀಟರ್ ವರೆಗಿನ ಪ್ಲಾಸ್ಟಿಕ್ ವಾಟರ್ ಬಾಟಲ್ ಗಳ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

 ಈಗಾಗಲೇ ಅಂಗಡಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಸಂಗ್ರಹವಿದ್ದು ಅವುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಹೊಸ ಬಾಟಲಿಗಳ ಖರೀದಿ ಮಾಡದಂತೆ ಸೂಚಿಸಲಾಗಿದೆ.

 ಪ್ಲಾಸ್ಟಿಕ್ ಬಾಟಲ್ ಬಳಕೆಯಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರತಿ ಮಳಿಗೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗಿದೆ. ಮಡಿಕೇರಿ ನಗರಕ್ಕೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲ್ ತರದಂತೆ ನಗರದ ಪ್ರವೇಶದಲ್ಲಿ ಮತ್ತು ನಗರದೊಳಗಡೆ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

Also Read  ತಮಿಳುನಾಡು: 13 ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ

error: Content is protected !!
Scroll to Top