ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com , ಫೆ.07. ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಬಜೆಟ್ ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಚೌಟ ಅವರು ಫೆ.06ರಂದು ಸಚಿವ ಪೀಯೂಷ್ ಅವರನ್ನು ಭೇಟಿಯಾಗಿದ್ದು, ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ ಸಮರ ಎದುರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಅಡಿಕೆ ಕೃಷಿಕರು ಸೂಕ್ತ ಬೆಲೆ ದೊರೆಯದೆ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ, ನಿಯಂತ್ರಣವಿಲ್ಲದೆ ಆಮದಾಗುತ್ತಿರುವ ಅಡಿಕೆ ಉತ್ಪನ್ನಗಳ ಮೇಲೆ ನಿಗಾ ವಹಿಸುವ ಮೂಲಕ ಇಲ್ಲಿನ ಅಡಿಕೆಗೆ ಸೂಕ್ತ ಮಾರುಕಟ್ಟೆ ದರ ದೊರೆಯುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದ್ದಾರೆ.

Also Read  ಬಿಸಿಲಿನ ಕಾವು ಹೆಚ್ಚಳದ ಸಾಧ್ಯತೆ ➤ ದ.ಕ ಜಿಲ್ಲಾಧಿಕಾರಿಯಿಂದ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಪ್ರಕಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಇತ್ತೀಚಿನ ವರ್ಷಗಳಲ್ಲಿ ಕೊಳೆರೋಗ ಹಾಗೂ ಎಲೆಚುಕ್ಕಿ ಸಮಸ್ಯೆ ಹೆಚ್ಚಾಗಿರುವುದರಿಂದ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಈ ಕಾರಣಕ್ಕೆ ಜಿಲ್ಲೆಯಲ್ಲಿ ಅಡಿಕೆಗೆ ಕಾಫಿಯನ್ನು ಪರ್ಯಾಯ ಬೆಳೆಯಾಗಿ ಬೆಳೆಸುವಲ್ಲಿ ರೈತರನ್ನು ಉತ್ತೇಜಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಸಚಿವರನ್ನು ಕೋರಿದ್ದಾರೆ.

error: Content is protected !!
Scroll to Top