(ನ್ಯೂಸ್ ಕಡಬ) newskadaba.com , ಫೆ.07. ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 16 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮ್ಹೌ ತಹಸಿಲ್‌ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು ಮಿನಿ ಬಸ್ ಇಳಿಜಾರಿನಲ್ಲಿ ಚಲಿಸುತ್ತಿದ್ದ ಟ್ರೇಲರ್ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪುರುಷರು ಮತ್ತು ಮಿನಿ ಬಸ್‌ನಲ್ಲಿ ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಕರ್ನಾಟಕದ ಬೆಳಗಾವಿಯ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.