(ನ್ಯೂಸ್ ಕಡಬ) newskadaba.com, ಫೆ.10. ಹೈದರಾಬಾದ್: ಕಳೆದ ವರ್ಷ ದೇಶವನ್ನೇ ಬೆಚ್ಚಿಬೀಳಿಸಿದ್ದ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಭಾನುವಾರ ನಾಲ್ವರನ್ನು ಬಂಧಿಸಿದ್ದಾರೆ.



ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ ಮುರಳೀರಾಂಬ, ವಿಶಾಖಪಟ್ಟಣಂ ಡಿಐಜಿ ಗೋಪಿನಾಥ್ ಜೆಟ್ಟಿ, ಗುಂಟೂರು ಐಜಿ ಸರ್ವಶ್ರೇಷ್ಠಿ ತ್ರಿಪಾಠಿ ಮತ್ತು ಎಫ್ಎಸ್ಎಸ್ಎಐ ಅಧಿಕಾರಿ ಸತ್ಯಕುಮಾರ್ ಪಾಂಡಾ ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದೆ.