ಭಾರತೀಯ ನೌಕಾಪಡೆಯಲ್ಲಿ 270 ಹುದ್ದೆಗೆ ಅರ್ಜಿ ಅಹ್ವಾನ

(ನ್ಯೂಸ್ ಕಡಬ) newskadaba.com, ಫೆ.10. ಬೆಂಗಳೂರು: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಖಾಲಿ ಇರುವ 270 ಎಸ್‌ಎಸ್‌ಸಿ ಆಫೀಸರ್‌ ಹುದ್ದೆಗಳ ಭರ್ತಿಗೆ ಭಾರತೀಯ ನೌಕಾಪಡೆ ಅರ್ಜಿ ಆಹ್ವಾನಿಸಿದೆ. ಪೈಲಟ್‌, ಏರ್‌ ಟ್ರಾಫಿಕ್‌ ಕಂಟ್ರೋಲರ್‌ ಮುಂತಾದ ಹುದ್ದೆಗಳಿದ್ದು, ಬಿ.ಎಸ್‌ಸಿ, ಬಿ.ಕಾಂ, ಎಂಜಿನಿಯರಿಂಗ್‌ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಫೆ. 25 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯುಟಿವ್‌ ಬ್ರ್ಯಾಂಚ್‌ – 60 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌

ಪೈಲಟ್ – 26 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌

ನೇವಲ್ ಏರ್ ಆಪರೇಶನ್ಸ್ ಆಫೀಸರ್ – 22 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌

Also Read  ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಏರ್ ಟ್ರಾಫಿಕ್ ಕಂಟ್ರೋಲರ್ (ATC) – 18 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌

ಲಾಜಿಸ್ಟಿಕ್ಸ್ – 28 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಬಿ.ಕಾಂ, ಬಿಇ ಅಥವಾ ಬಿ.ಟೆಕ್‌, ಎಂಬಿಎ, ಎಂಸಿಎ, ಎಂ.ಎಸ್‌ಸಿ

ಶಿಕ್ಷಣ – 15 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಎಸ್‌ಸಿ

ಎಂಜಿನಿಯರಿಂಗ್ ಶಾಖೆ (ಸಾಮಾನ್ಯ ಸೇವೆ – GS) – 38 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌

ಎಲೆಕ್ಟ್ರಿಕಲ್ ಬ್ರ್ಯಾಂಚ್‌ (ಜನರಲ್ ಸರ್ವಿಸ್ – (GS) 45 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌

ನೇವಲ್ ಕನ್‌ಸ್ಟ್ರಕ್ಟರ್‌ – 18 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

Also Read  ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..!

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಮೆರಿಟ್‌ ಲಿಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ ನಿರ್ಧರಿಸಲಾಗಿದ್ದು, ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ ಲಭ್ಯ ಎಂದು ಅಧಿಸೂಚನೆ ತಿಳಿಸಿದೆ.

error: Content is protected !!
Scroll to Top