ಏರ್‌ ಶೋ ನಡುವೆಯೇ ಬೆಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ

(ನ್ಯೂಸ್ ಕಡಬ) newskadaba.com, ಫೆ.11. ಬೆಂಗಳೂರು: ಏರೋ ಇಂಡಿಯಾ ಶೋ ನಡೆಯುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ದುಷ್ಕರ್ಮಿಗಳು ಫೆಬ್ರವರಿ 8ರಂದು ಇಮೇಲ್ ಮುಖಾಂತರ ಬಾಂಬ್ ಬೆದರಿಕೆ ಹಾಕಿದ್ದಾರೆ. mahanteshs6699@proton.mi ಎನ್ನುವ ಐಡಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ಆ ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ನಾನು ಪತ್ರ ಬರೆದು ಅವರಿಂದ ಪ್ರತಿಕ್ರಿಯೆ ಕೋರಿದ್ದೇನೆ. ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಬೆಂಗಳೂರು, ಚೆನ್ನೈ, ಕೇರಳದಿಂದ ಬರುವ ಫ್ಲೈಟ್​​ಗಳ ಮೇಲೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

Also Read  ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..!

ಈ ಸಂಬಂಧ ಬೆಂಗಳೂರು ಏರ್​ಪೋರ್ಟ್​ ಪೊಲೀಸ್​ ಠಾಣೆಯಲ್ಲಿ BNS ಕಾಯ್ದೆ ಸೆಕ್ಷನ್ 125, 351, 353ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಏರ್​ಪೋರ್ಟ್​ಗೆ ಭದ್ರತೆ ಹೆಚ್ಚಿಸಲಾಗಿದೆ. ಅತ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದರೆ, ಇತ್ತ ಯಲಹಂಕ ವಾಯುನೆಲೆಯಲ್ಲಿ ಏರ್​ ಶೋ ನಡೆಯುತ್ತಿದೆ. ಈ ಎರಡು ಇವೆಂಟ್​ಗೆ ಹಲವಾರು ಅಂತಾರಾಷ್ಟ್ರೀಯ ಪ್ರತಿನಿಧಿಗಳು, ರಕ್ಷಣಾ ಕಂಪನಿಗಳು ಮತ್ತು ವಾಯುಯಾನ ತಜ್ಞರು ಆಗಮಿಸಿದ್ದಾರೆ. ಇದರ ಮಧ್ಯೆ ಈ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದರಿಂದ ಯಲಹಂಕ ವಾಯುನೆಲೆ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

 

error: Content is protected !!
Scroll to Top