ಸುಳ್ಯ: ಅಕ್ರಮ ಗಾಂಜಾ ಪತ್ತೆ ► ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.29. ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡಿರುವ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಸುಳ್ಯದಲ್ಲಿ ಬುಧವಾರದಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಸುಳ್ಯ ಕಸಬಾ ನಿವಾಸಿ ಮಹಮ್ಮದ್ ಕಲ್ಲಮಟ್ಟು ಎಂಬವರ ಪುತ್ರ ಪಿ.ಎಂ ಮೊಯ್ದಿನ್(35) ಹಾಗೂ ಸುಳ್ಯ ಕಲ್ಲುಮುಟ್ಟು ನಿವಾಸಿ ಚಿನ್ನ ಮುತ್ತು ಎಂಬವರ ಪುತ್ರ ಮುರಳಿ ಸಿ.(23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಸುಳ್ಯ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಸುಳ್ಯ ಠಾಣಾ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮೋಟಾರ್ ಸೈಕಲ್ KA-12-K-6163 ನಿಲ್ಲಿಸಿ ಅದರಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪರಿಶೀಲಿಸಲಾಗಿ ಅವರ ವಶದಲ್ಲಿದ್ದ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು   

error: Content is protected !!
Scroll to Top