ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ; 20ಕ್ಕೂ ಹೆಚ್ಚು ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಫೆ. 13. ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಬಸ್ (ಕೆಎಸ್ಆರ್‌ಟಿಸಿ) ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಲ್ಲ ಗಾಯಾಳುಗಳನ್ನು ಕೆ.ಆರ್. ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ ಆಲೇನಹಳ್ಳಿಯಿಂದ ಕೆ.ಆರ್.ಪೇಟೆ ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿದ್ದ ವೇಳೆ ಕೆಆರ್ ಪೇಟೆ ತಾಲೂಕಿನ ಕುಂದಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರಕ್ಕೆ ಡಿಕ್ಕಿಯಾಗಿದೆ. ಈ ಪೈಕಿ ಹೆಚ್ಚು ಶಾಲಾ-ಕಾಲೇಜಿನ ವಿದ್ಯಾರ್ಥಿಗಳೇ ಇದ್ದು, ಹಲವರ ಕೈ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

Also Read  ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ…!        ➤  ಅರ್ಜಿ ಸಲ್ಲಿಕೆ ಅವಧಿ ಮಾ.15ರ ವರೆಗೆ ವಿಸ್ತರಣೆ

‘ಕೃಷ್ಣರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜ್ಯ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ’ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

error: Content is protected !!
Scroll to Top