ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ಇಂದಿನಿಂದ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಯಾಗಿವೆ.

ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರಿಂದ ಜಾರಿಗೆ ಬರಲಿವೆ ಎಂದು ಘೋಷಿಸಿದರು.

error: Content is protected !!
Scroll to Top