(ನ್ಯೂಸ್ ಕಡಬ) newskadaba.com ಫೆ. 14. ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಪರೀಕ್ಷೆಯ ಭಯದಿಂದ ಎಸ್ಎಸ್ಎಲ್‌ಸಿ (SSLC) ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.



ಚಿತ್ರದುರ್ಗ ನಗರದ ತಮಟಕಲ್ಲು ರಸ್ತೆ ಈಶ್ವರ ಬಡಾವಣೆ ನಿವಾಸಿ ರಾಕೇಶ್ (16) ಪರೀಕ್ಷೆಯಲ್ಲಿ ಅನುತ್ತೀರ್ಣನಾಗುವ ಆತಂಕದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷೆಯ ಭಯದಿಂದ ರಾಕೇಶ್ ಗುರುವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಘಟನೆ ಸಂಬಂಧ ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.