(ನ್ಯೂಸ್ ಕಡಬ) newskadaba.com ಫೆ. 19.ಮೈಸೂರು: ರಾಜ್ಯದ ಕೆಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಅವರು ಮಂಗಳವಾರ ಹೇಳಿದ್ದಾರೆ.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿವಿ ಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ವಿದ್ಯೆಯನ್ನು ಮಾರಾಟಕ್ಕಿಟ್ಟ ಭ್ರಷ್ಟ ವ್ಯವಸ್ಥೆ ಈಗಲೂ ಮುಂದುವರಿದಿದೆ. ವಿದ್ಯಾರ್ಥಿಗಳ ಶುಲ್ಕದಲ್ಲಿ ವಿಶ್ವವಿದ್ಯಾಲಯ ನಡೆಯುವಂತಾಗಿದೆ. ರಾಜ್ಯದಲ್ಲೀಗ ಅಕ್ಷರ, ಆರೋಗ್ಯ ಎರಡಕ್ಕೂ ಬೆಲೆ ಇಲ್ಲದಂತಾಗಿದೆ ಎಂದು ಹೇಳಿದರು.