(ನ್ಯೂಸ್ ಕಡಬ) newskadaba.com ಫೆ. 19. ನವದೆಹಲಿ: ಜಾಗತಿಕ ಆರ್ಥಿಕ ಅನಿಶ್ಚತತೆ ನಡುವೆಯೇ ಚಿನ್ನದ ಬೆಲೆ ಮತ್ತಷ್ಟು ಏರಿಕೆ ಕಂಡಿದೆ. ಬುಧವಾರ ಇಲ್ಲಿ ಪ್ರತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 300 ರು.ನಷ್ಟು ಏರಿಕೆ ಕಂಡು 88500 ರು.ಗೆ ತಲುಪಿದೆ.


ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ 88200 ರು.ಗೆ ತಲುಪಿದೆ. ಇನ್ನೊಂದೆಡೆ ಬೆಳ್ಳಿ ಧಾರಣೆಯು ಪ್ರತಿ ಕೆ.ಜಿ.ಗೆ 800 ರು. ಹೆಚ್ಚಳವಾಗಿ 99,000 ರು. ತಲುಪಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ತಿಳಿಸಿದೆ.