ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಫೆ. 19. ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ, 18 ವರ್ಷ ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರರಾಗಬೇಕು. ಮತ ಚಲಾಯಿಸಬೇಕು. ಚುನಾವಣಾ ಆಯೋಗವು ಮತದಾರರೊಂದಿಗೆ ಯಾವಾಗಲೂ ಇರಲಿದೆ ಎಂದು ಹೇಳಿದರು.

Also Read  ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ

ಇದೇ ವೇಳೆ ವಿವೇಕ್ ಜೋಶಿ ಅವರು ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ಹರಿಯಾಣ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿರುವ ಜೋಶಿ ಅವರು ಸೋಮವಾರ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

error: Content is protected !!
Scroll to Top