ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ

(ನ್ಯೂಸ್ ಕಡಬ) newskadaba.com ಫೆ. 19. ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ  ಫೆಬ್ರುವರಿಯಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದಲೇ ಅಕ್ಕಿಯನ್ನ ಗ್ರಾಹಕರಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು.

Also Read  ಕೈಕಂಬ: ಅನನ್ಯ ಚೇತನ ಫೌಂಡೇಶನ್(ರಿ) ವತಿಯಿಂದ ಬ್ಯಾರಿಕೇಡ್ ಹಸ್ತಾಂತರ

ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೂಡ ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿ‌ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ. ಫೆಬ್ರುವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ ಎಂದರು.

error: Content is protected !!
Scroll to Top